ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬರಗಾಲ; ಅಧಿಕಾರಿಗಳ ಬೇಜವಾಬ್ದಾರಿಯನ್ನು ಸರ್ಕಾರ ಸುತಾರಾಂ ಸಹಿಸಲ್ಲ: ಸಿಎಂ

ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಬರಗಾಲದ ಸಂದರ್ಭವನ್ನು ಸರಿಯಾಗಿ ನಿರ್ವಹಿಸಿ. ಅಧಿಕಾರಿಗಳ ಬೇಜವಾಬ್ದಾರಿಯನ್ನು ಸರ್ಕಾರ ಸುತಾರಾಂ ಸಹಿಸಲ್ಲ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಎಂದು ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ನೀಡಿದ ಸೂಚನೆಗಳ ಹೈಲೈಟ್ಸ್ಗಳು ಹೀಗಿವೆ..

  • ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಪಶು ಸಂಗೋಪನೆ, ಕೃಷಿ ಇಲಾಖೆಗಳ ಪ್ರಗತಿಗೆ ಪ್ರಥಮ ಆಧ್ಯತೆ ನೀಡಬೇಕು.
  • DC, CEO, ಕಾರ್ಯದರ್ಶಿಗಳ ಸಭೆಯಲ್ಲಿ ನಾನು ಕೊಟ್ಟ ಸೂಚನೆಗಳು, ನಿರ್ದೇಶನಗಳು ಚಾಚೂ ತಪ್ಪದೆ ಜಾರಿ ಆಗಿದೆಯಾ ? ಎಷ್ಟು ಜಾರಿ ಆಗಿದೆ ಎನ್ನುವ ಕುರಿತು ಸಭೆಗೆ ಸ್ಪಷ್ಟ ಮಾಹಿತಿ ನೀಡಿ. ತಪ್ಪು ಮಾಹಿತಿ ನೀಡಿದರೆ ಕಠಿ ಕ್ರಮ. ನಮ್ಮನ್ನು ಒಪ್ಪಿಸುವುದಕ್ಕಾಗಿ ಸಭೆಗೆ ತ್ಪಪ್ಪು ಮಾಹಿತಿ ನೀಡಬೇಡಿ.
  • ಬರಗಾಲ ನಿರ್ವಹಣೆಗೆ ಎಷ್ಟೇ ಹಣ ಅಗತ್ಯವಿದ್ದರೂ, ಎಷ್ಟೇ ಕಷ್ಟ ಆದರೂ ಸರ್ಕಾರ ಹಣ ಒದಗಿಸುತ್ತದೆ. ನೀವು ಜನ ಜಾನವಾರುಗಳಿಗೆ ಯಾವುದಕ್ಕೂ ತೊಂದರೆ ಆಗದಂತೆ ಕೆಲಸ ಮಾಡಬೇಕು.
  • ಮಾರ್ಚ್, ಏಪ್ರಿಲ್, ಮೇ ತಿಂಗಳಿಗಿಂತ ಹೆಚ್ಚು ವಿದ್ಯುತ್ ಬೇಡಿಕೆ ಇದೆ. ಆಗ 11 ಸಾವಿರ ಮೆಗಾವ್ಯಾಟ್ ಬಳಕೆ ಆಗುತ್ತಿತ್ತು. ಈಗ 15-16 ಸಾವಿರ ಮೆಘಾವ್ಯಾಟ್ ವಿದ್ಯುತ್ ಗೆ ಬೇಡಿಕೆ ಇದೆ.
  • ರೈತರ ಪಂಪ್ ಸೆಟ್ ಮತ್ತು ಜನರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ನಕಾಶೆ, ಯೋಜನೆ ಸಿದ್ದಪಡಿಸಿ ಅದಕ್ಕೆ ತಕ್ಕಂತೆ ಕ್ರಮ ವಹಿಸಿ.
  • ಸದ್ಯ ಕಟಾವಿಗೆ ಬರುವ ಬೆಳೆಗಳನ್ನು ಉಳಿಸಿಕೊಳ್ಳಲು ತೀವ್ರ ನಿಗಾವಹಿಸಿ ಕ್ರಮ ಕೈಗೊಳ್ಳಿ.

ಮಾಹಿತಿ ಕೊರತೆ; ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಿಎಂ ಕ್ಲಾಸ್

ನಿಮಗೇ ಸರಿಯಾದ ಮಾಹಿತಿ ಇಲ್ಲದಿದ್ದರೆ, ರೈತರಿಗೆ ಏನು ಸಲಹೆ ನೀಡ್ತೀರಿ? ಸ್ಥಳ ಸಮೀಕ್ಷೆ ಮಾಡುವುದನ್ನು ಏಕೆ ನಿಲ್ಲಿಸಿದ್ದೀರಿ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಲಾಸ್ ತೆಗೆದುಕೊಂಡರು.

ಮಂಡ್ಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು ಕೇಳಿದ ಮಾಹಿತಿ ಒದಗಿಸುವಲ್ಲಿ ವಿಫಲರಾಗಿದ್ದಕ್ಕೆ ಜಂಟಿ ನಿರ್ದೇಶಕರಿಗೆ ತರಾಟೆಗೆ ತೆಗೆದುಕೊಂಡರು.

ರಾಜ್ಯ ಸರ್ಕಾರದ ಆರ್ಥಿಕ ಸಮೀಕ್ಷೆ ಓದಿದ್ದೀರಾ ಎಂದು ಸಿಎಂ ಕೇಳಿದರು. ಇಲ್ಲ ಎಂದು ಉತ್ತರ ಬಂದಿದ್ದರಿಂದ ಗರಂ ಆದರು.

ಬೆಳೆ ಇಳುವರಿ ಮತ್ತು ಬಿತ್ತನೆ ಪ್ರಮಾಣದಲ್ಲಿ ಮಂಡ್ಯ ಜಿಲ್ಲೆ ರಾಜ್ಯದ ಸರಾಸರಿಗಿಂತ ಕಡಿಮೆ ಇದೆ. ಏಕೆ ಹೀಗಾಗಿದೆ‌ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಭೂಮಿಯ ಫಲವತ್ತತೆ ಕಡಿಮೆ ಆಗಿದೆ ಎಂದು ಜಂಟಿ ನಿರ್ದೇಶಕರು ಉತ್ತರಿಸಿದರು. ಹಾಗಿದ್ದರೆ ಫಲವತ್ತತೆ ಹೆಚ್ಚಿಸಲು ಸರ್ಕಾರದ ಕಾರ್ಯಕ್ರಮಗಳಿವೆ. ಅದನ್ನು ಎಷ್ಟು ಜಾರಿ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಕೃಷಿ ಭೂಮಿಗಳಿಗೆ ತಪ್ಪದೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು. ರೈತರ ಜತೆ ಮಾತನಾಡಿ ಅವರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ರೋಗ ರಹಿತ ಬೀಜ, ಅಗತ್ಯ ರಸಗೊಬ್ಬರ, ಫಲವತ್ತತೆ ಹೆಚ್ಚಿಸಲು ಕ್ರಮ ಕೈಗೊಳ್ಳಿ. ಮುಂದಿನ ಸಭೆ ವೇಳೆಗೆ ಪರಿಸ್ಥಿತಿ ಸುಧಾರಿಸಿರಬೇಕು ಎನ್ನುವ ಎಚ್ಚರಿಕೆ ಮಾದರಿಯ ಸಲಹೆಗಳನ್ನು ಮುಖ್ಯಮಂತ್ರಿಗಳು ನೀಡಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ