ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

’56 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನಿಮ್ಮ ಒತ್ತಾಯಗಳನ್ನು ಕೇಳಲು ನಾನು ಬಂದಿದ್ದೇನೆ’

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು.‌

ಹೋರಾಟ ನಿರತ ರೈತರಿಂದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ನುಡಿದರು.

ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಅನುಮಾನ ಬೇಡವೇ ಬೇಡ ಎಂದರು.

ಕೃಷಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ನರೇಂದ್ರಸ್ವಾಮಿ ಸೇರಿದಂತೆ ಹಲವು ಮಂದಿ ನಾಯಕರು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ