ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೆ.ಸಿ.ಆರ್ ಅವರೇ ಕರ್ನಾಟಕ ರಾಜ್ಯಕ್ಕೆ ಬನ್ನಿ: 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ

ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ: ಸಿಎಂ
  • ರೇವಂತ್ ರೆಡ್ಡಿ ಎರಡೂ ಕ್ಷೇತ್ರದಲ್ಲಿ ವಿಜಯ ಸಾಧಿಸಿ ಕೆ.ಸಿ.ಆರ್ ಅವರನ್ನು ಸೋಲಿಸುವುದು ಖಚಿತ
  • ತೆಲಂಗಾಣದ ಜನತೆ ಮೋದಿಯವರ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ
  • ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಸರಣಿ ಸುಳ್ಳುಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕೆ.ಸಿ.ಆರ್ ಅವರೇ ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಬನ್ನಿ ಎಂದು ಪಂಥಾಹ್ವಾನ ನೀಡಿದರು.

ಬಿಜೆಪಿ ಮತ್ತು ಬಿಆರ್‍‌ಎಸ್‌ ಎರಡೂ ಒಂದೇ. ಬಿಆರ್‍‌ಎಸ್‌ ತೆಲಂಗಾಣದಲ್ಲಿ ಬಿಜೆಪಿ ಯ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂದರು.

ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ದಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ದಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ಟೀಕಿಸಿದರು.

ಮೋದಿಯವರು ದೇಶದ ಶೇ4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರ ಈ ಶೇ4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ ಎಂದು ವ್ಯಂಗ್ಯವಾಡಿದರು.

ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು. ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ ಎಂದರು.

ಟಿಪಿಸಿಸಿ ಅಧ್ಯಕ್ಷರಾದ ರೇವಂತ್ ರೆಡ್ಡಿ ಸೇರಿ ಹಲವು ನಾಯಕರು ವೇದಿಕೆಯಲ್ಲಿದ್ದರು.

ಮುಖ್ಯಾಂಶಗಳು

  • ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ ಬಿಆರ್‍‌ಎಸ್‌ಅನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ
  • ಬಿಜೆಪಿ ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು
  • ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ
  • ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ
  • ನರೇಂದ್ರ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ಕಂಡಿಲ್ಲ
Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ