ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

‘ವೈಜ್ಞಾನಿಕತೆ ವೈಚಾರಿಕತೆ ಬೆಳೆದಾಗ ಮಾತ್ರ ಕಲಿತ ವಿದ್ಯೆಗೆ ಬೆಲೆ’

ಸಮಾಜದ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಅವರು ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವೈಜ್ಞಾನಿಕತೆ ವೈಚಾರಿಕತೆ ಬೆಳೆದಾಗ ಮಾತ್ರ ಕಲಿತ ವಿದ್ಯೆಗೆ ಬೆಲೆ ಬರುತ್ತದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸ್ವಾಮಿ ವಿವೇಕಾನಂದ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಯ ರಜತ ಮಹೋತ್ಸವ ಹಾಗೂ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

20 ವರ್ಷಗಳ ಹಿಂದೆ ಈ ಶಾಲೆಯ ಉದ್ಘಾಟನೆ ಮಾಡಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದು ಸಂಸ್ಥೆಯ ಬೆಳವಣಿಗೆಗೆ ಸಾಕ್ಷಿ. ಬೆಳವಾಡಿ ಭಾಗದಲ್ಲಿನ ಬಹುತೇಕ ಮಕ್ಕಳು ಹಳ್ಳಿಗಾಡಿನಿಂದ ಬಂದಿರುವವರು. ಅವರಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಸಮಾಜದ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಅವರು ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು.

ವೈಜ್ಞಾನಿಕವಾಗಿ ಚಿಂತನೆ ಮಾಡುವ ಶಕ್ತಿ ಅಗತ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳಸಬೇಕು. ಸಮಾಜಲ್ಲಿ 850 ವರ್ಷಗಳ ಹಿಂದೆಯೇ ಮೌಢ್ಯಗಳನ್ನು ಬಿಟ್ಟು ವಿಚಾರವಂತಿಕೆ ಬೆಳೆಸಿಕೊಳ್ಳಬೇಕು ಎಂದು ಬಸವಾದಿ ಶರಣರು ಸಾರಿದ್ದರು. ಶಿಕ್ಷಿತರಾದ ಮೇಲೆ ವೈಜ್ಞಾನಿಕವಾಗಿ ಚಿಂತನೆ ಮಾಡುವ ಶಕ್ತಿ ಅಗತ್ಯ. ಉನ್ನತ ಶಿಕ್ಷಣ ಪಡೆದೂ ಕಂದಾಚಾರಗಳಿಗೆ ಜೋತು ಬಿದ್ದರೆ, ಶಿಕ್ಷಣ ಎಂದು ಹೇಳಾಗದು. ಸಮಾಜದ ಜೊತೆಗೆ ಸ್ಪಂದಿಸುವ ಜ್ಞಾನವಿರಬೇಕು. ಆಗ ಮಾತ್ರ ಅವರನ್ನು ಸುಶಿಕ್ಷಿತರು ಎಂದು ಕರೆಯಬಹುದು ಎಂದರು.

ಸಮಸ್ಯೆಗಳನ್ನು ಪರಿಹಾರ ಮಾಡುವ ಶಕ್ತಿ ವಿದ್ಯಾರ್ಥಿಗಳಿಗೆ ಬರಬೇಕು

ಬರೀ ಓದು ಬರೆಯಲು ಮಾತ್ರವಲ್ಲದೆ ಸಾಮಾಜಿಕ ವ್ಯಕ್ತಿ ಯಾಗಿ ಸಮಾಜದ ಜವಾಬ್ದಾರಿಯನ್ನು ಹೊರುವ, ಸಮಸ್ಯೆಗಳನ್ನು ಪರಿಹಾರ ಮಾಡುವ ಶಕ್ತಿ ವಿದ್ಯಾರ್ಥಿಗಳಿಗೆ ಬರಬೇಕು. ಮಕ್ಕಳಿಗೆ ವೈಚಾರಿಕತೆ ತುಂಬಿ ಬೆಳಸಬೇಕು ಎನ್ನುವುದನ್ನು ಪ್ರತಿಯೊಬ್ಬ ಗುರುಗಳು ಬೆಳೆಸಿಕೊಳ್ಳಬೇಕು. ಶಿಕ್ಷಕರಲ್ಲಿ ವೈಚಾರಿಕತೆ ಬಂದರೆ ಮಕ್ಕಳಿಗೆ ಕೂಡ ಅದು ಬರಲು ಸಾಧ್ಯ. ಕೇವಲ ಇಂಗ್ಲಿಷ್ ನಲ್ಲಿ ಮಾತನಾಡಿದರೆ ಅದು ಶಿಕ್ಷಣವಲ್ಲ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು

ಗುರುದೇವೋಭವ ಎಂದು ಕರೆಯಲ್ಪಡುವ ಶಿಕ್ಷಕರು, ರೈತರು ಹಾಗೂ ಸೈನಿಕರನ್ನು ಹೆಚ್ಚು ಗೌರವ ದಿಂದ ಕಾಣುತ್ತೇವೆ. ತಂದೆತಾಯಿಗಳ ಮೇಲೂ ಶಿಕ್ಷಣ ನೀಡುವ ಹೊಣೆಯಿದೆ. ಇಂಗ್ಲಿಷ್ ಕಲಿಯಬೇಕು, ಆದರೆ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೆಚ್ಚು ಸುಲಭವಾಗಿ ಅರ್ಥವಾಗುತ್ತದೆ ಎಂದರು.

ಎಲ್ಲಾ ಮಕ್ಕಳಿಗೂ ಶಿಕ್ಷಣ ಕಡ್ಡಾಯ

ನಮ್ಮಕ್ಷೇತ್ರದ ಮಕ್ಕಳು ವಿದ್ಯಾವಂತರಾದರೆ ಅದಕ್ಕಿಂತ ಸಂತೋಷ ಬೇರೆ ಯಾವುದೂ ಇಲ್ಲ.
14 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ಕಡ್ಡಾಯ ಹಾಗೂ ಅದು ಮೂಲ ಭೂತ ಹಕ್ಕು ಎಂದರು.ನೂರಕ್ಕೆ ನೂರರಷ್ಟು ಮಕ್ಕಳು ವಿದ್ಯಾವಂತರಾಗಬೇಕು. ದೇಶದಲ್ಲಿ ಕೇವಲ 76 % ಮಾತ್ರ ವಿದ್ಯಾವಂತರಿದ್ದಾರೆ . 75 ವರ್ಷಗಳಾದರೂ ಎಲ್ಲರೂ ಶಿಕ್ಷಣ ಪಡೆದಿಲ್ಲ ಎಂದರು.

ಸಾರ್ವತ್ರಿಕ ಮೂಲ ಆದಾಯದ ಆಧಾರದಲ್ಲಿ ಯೋಜನೆಗಳು

ನಮ್ಮ ಸರ್ಕಾರ ಬಂದ ಮೇಲೆ ಮನೆ ಮನೆಗೆ ಅನೇಕ ಕಾರ್ಯಕ್ರಮ ಗಳನ್ನು ನೀಡಿದೆ. ಉಚಿತ ವಿದ್ಯುತ್, 2000 ಸಾವಿರ ರೂ. 5 ಕೆಜಿ ಹೆಚ್ಚು ಅಕ್ಕಿ, ಅನ್ನಭಾಗ್ಯ ಯೋಜನೆಗಳನ್ನು ಬಡವರಿಗೆ ನೀಡುವುದು ಖರ್ಚು ಮಾಡುವ ಶಕ್ತಿ ಬರಲಿ ಎಂದು ನೀಡಲಾಗುತ್ತಿದೆ. ಸಾರ್ವತ್ರಿಕ ಮೂಲ ಆದಾಯದ ಆಧಾರದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ