ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಸ್. ನಿಜಲಿಂಗಪ್ಪನವರು ರಾಜ್ಯ ಕರ್ನಾಟಕವೆಂದು ನಾಮಕರಣವಾದ ನಂತರದ ಮೊದಲ ಮುಖ್ಯಮಂತ್ರಿ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು. ನಿಜಲಿಂಗಪ್ಪನವರು ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. ಅವರ ಅವಧಿಯಲ್ಲಿ ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಾಜಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಕಾಂಗ್ರೆಸ್ ನವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ

ಜಾರ್ಖಂಡ್ ಸಂಸದರ ಮನೆಯಲ್ಲಿ ಐಟಿ ದಾಳಿಯಾಗಿ ಹಣ ದೊರೆತಿದ್ದು, ಅಲ್ಪಸಂಖ್ಯಾತರಿಗೆ ಆರ್ಥಿಕ ಸೌಲಭ್ಯವಿಲ್ಲವೆನ್ನುವ ಕಾಂಗ್ರೆಸ್ ನವರ ಮನೆಯಲ್ಲಿಯೇ ಅಪಾರ ಹಣ ದೊರೆಯುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,. ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನುರೀತ್ಯ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇ ಬೇಕು. ಆದರೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿ ಪಕ್ಷದವರ ಮೇಲೆ ಐಟಿದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ