ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

‘ಬಾಬಾಬುಡನ್ ಗಿರಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್’ : ಮಾಧ್ಯಮ ವರದಿ ಸುಳ್ಳು

ಬಾಬಾಬುಡನ್ ಗಿರಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ.

ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು.

2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ.

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ಹೇಳಿಕೆ ತಿಳಿಸಿದೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ