ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರೇಷ್ಮೆ ಭವನ ನಿರ್ಮಾಣಕ್ಕೆ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮದ ಹೂಡಿಕೆ: ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸಿಎಂ ಸೂಚನೆ

ಬೆಂಗಳೂರಿನ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹೂಡಿಕೆ

ಬೆಂಗಳೂರಿನ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹೂಡಿಕೆ ಮಾಡಲು ಮುಂದೆ ಬಂದಿದ್ದು, ಈ ಕುರಿತು ಸವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಇದು ನಗರದ ಕೇಂದ್ರ ಭಾಗದಲ್ಲಿರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ಸವಿವರ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಇದರಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತೂ ಸಹ ಮಾಹಿತಿ ಒದಗಿಸುವಂತೆ ಸೂಚಿಸಿದರು.

ಸಭೆಯಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್‌, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ