ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಲು ಸ್ವಾಮೀಜಿಗಳು-ಚಿಂತಕರ ಒಕ್ಕೋರಲ ಒತ್ತಾಯ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ ಎಂದ ಸಿಎಂ

ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದರು.

ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದರು.

ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ ಪ್ರಮುಖರು.

ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.

ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಹೋರಾಟಗಾರ್ತಿ ಸೌಮ್ಯ, ಅಖಿಲ, ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ