ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೂಡಲೇ ಕೇಂದ್ರಕ್ಕೆ ಸ್ಪಷ್ಟೀಕರಣ; ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904 ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಮುಂದುವರೆದು ಮಾತನಾಡುತ್ತಾ, ” ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ರಮ ವಹಿಸಬೇಕು” ಎಂದರು. “96-97 ರಲ್ಲಿಯೇ ದಿವಂಗತ ಶಾಸಕ ನಾರಾಯಣ ರಾವ್ ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದರು ಎಂದು ಮರೆಯಬಾರದು” ಎಂದರು.

ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲುಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು ಎಂದರು. ಈ ಸಾಲಿನಲ್ಲಿ ಅಂಬಿಗರ ಚೌಡಯ್ಯ ಮೊದಲನೇ ಸಾಲಿನಲ್ಲಿ ನಿಲ್ಲುತ್ತಾರೆ. ಅದಕ್ಕೆ ಬಸವಣ್ಣನವರು ಇವರಿಗೆ ನಿಜಶರಣ ಎಂದು ಕರೆದರು ಎಂದು ಸಿಎಂ ವಿವರಿಸಿದರು.

ಸಮಸಮಾಜದ ಕನಸು ನನಸಾಗಲು ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬೇಕು

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಿಗೂ ಬರಬೇಕು. ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂಬ ಎರಡು ತತ್ವಗಳನ್ನು ನೀಡಿದ್ದಾರೆ. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೂಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆ ಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ. ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು ಎಂದರು.

ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು

ಅಂಬಿಗರ ಚೌಡಯ್ಯ ನವರ ಹಾದಿಯಲ್ಲಿ ನಡೆಯುವುದು ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ. ಅವರ ವಿಚಾರಗಳನ್ನು ಜನರಿಗೆ ತಿಳಿಸಲು ಜಯಂತ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದರು.

ನಮ್ಮ ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಪಟ್ಟಭದ್ರ ಹಿತಾಸಕ್ತಿಯ ವಿರುದ್ಧ ನಿಲ್ಲಬೇಕಾಗುತ್ತದೆ. ಬದಲಾವಣೆ ಬಯಸದ ಜನ ಆಗಲೂ ಇದ್ದರು, ಈಗಲೂ ಇದ್ದಾರೆ ಎಂದರು. ಮುಖ್ಯ ಮಂತ್ರಿಗಳು ಹಿಂದುಳಿದ ಸಮಾಜದೊಂದಿಗೆ ಸದಾ ಇರುವುದಾಗಿ ಭರವಸೆಯಿತ್ತರು.

ಇದೇ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ನವರ ಬಗ್ಗೆ ರಾಷ್ಟ ಕವಿ ಜಿ.ಎಸ್.ಶಿವರುದ್ರಪ್ಪನವರ ಕವಿತೆಯನ್ನು ಸಿಎಂ ವಾಚಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ