ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ: ಸಂಪುಟ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ಸಚಿವ ಸಂಪುಟ ನಿರ್ಧರಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ಸಚಿವ ಸಂಪುಟ ನಿರ್ಧರಿಸಿತು.

ಸಂಪುಟ ಸಭೆಯ ಇತರ ಪ್ರಮುಖ ನಿರ್ಣಯಗಳು

  • ಗೃಹ ಜ್ಯೋತಿ ಯೋಜನೆಯ ಅನುಷ್ಠಾನ ಕುರಿತು ದಿನಾಂಕ 5.6.2023 ರಂದು ಹೊರಡಿಸಿರುವ ಸರ್ಕಾರಿ ಆದೇಶವನ್ನು ಮಾರ್ಪಡಿಸಿ ಮಾಸಿಕ 48 ಯೂನಿಟ್ ಗಳಿಗಿಂತ ಕಡಿಮೆ ಬಳಸುವ LT 2 ಗ್ರಾಹಕರಿಗೆ ಹೆಚ್ವರಿ 10 % ಬದಲಿಗೆ ಹೆಚ್ಚುವರಿ 10 ಯೂನಿಟ್ ಅರ್ಹತಾ ಯೂನಿಟ್ ಗಳನ್ನು ಒದಗಿಸಲು ಸಚಿವ ಸಂಪುಟ ನಿರ್ಧರಿಸಿದೆ.
  • ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಷೇರು ಬಂಡವಾಳವನ್ನು ರೂ.600 ಕೋಟಿ ರೂ.ಗಳಿಂದ 1200 ಕೋಟಿ ರೂ.ಗಳಿಗೆ ಹೆಚ್ಚಿಸಲು ಸಚಿವ ಸಂಪುಟ ಅನುಮೋದಿಸಿದೆ.
  • ಉಡುಪಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಭವನ ಮತ್ತು ಎ.ಡಿ.ಆರ್ ಸಂಕೀರ್ಣ ವನ್ನೊಳಗೊಂಡ ಅನೆಕ್ಸ್ ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ( ಪ್ರಥಮ ಹಂತ) ರೂ.15.14 ಕೋಟಿಗಳ ಅಂದಾಜುಪಟ್ಟಿಗೆ ನ್ಯಾಯಾಲಯ ಕಟ್ಟಡಗಳ ನಿರ್ಮಾಣಕ್ಕೆ ಸಚಿವ ಸಂಪುಟದ ಒಪ್ಪಿಗೆ
  • ವಿಜಯನಗರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ನಂದಿಹಾಳ ಪಿ.ಹೆಚ್ ಗ್ರಾಮದ ಹೆಸರನ್ನು ಆರೂಢ ನಂದಿಹಾಳ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ
  • ಚಿಕ್ಕಮಗಳೂರು ಜಿಲ್ಲೆಯ ಐ.ಡಿ.ಪೀಠದ ಶ್ರೀ ಗುರುದತ್ತಾತ್ರೆಯ ಬಾಬಾ ಬುಡನ್ ಸ್ವಾಮಿ ದರ್ಗಾ ಅಧಿಸೂಚಿತ ಸಂಸ್ಥೆಗೆ ಶ್ರೀ ಸೈಯದ್ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಇವರು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಎಸ್ ಎಲ್ ಪಿ ಪ್ರಕರಣದಲ್ಲಿ ಸರ್ಕಾರದ ನಿಲುವನ್ನು ವ್ಯಕ್ತಪಡಿಸಲು, ಪ್ರಕರಣದ ಸಮಗ್ರ ಪರಿಶೀಲನೆ ನಡೆಸಿ ಶಿಫಾರಸ್ಸು ನೀಡಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಗೃಹ ಸಚಿವರು, ಸದಸ್ಯರಾಗಿ ಕಾನೂನು ಸಚಿವರು, ಸಾರಿಗೆ ಸಚಿವರು , ಕಂದಾಯ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸುವ ನಿರ್ಣಯ ಕೈಗೊಳ್ಳಲಾಗಿದೆ.
  • ಶಿವಮೊಗ್ಗ ನಗರದ ಹಳೆಜೈಲು ಆವರಣದ ಸ.ನಂ.75ರಲ್ಲಿನ ಒಟ್ಟು 46.32 ಎಕರೆ –ಗುಂಟೆ ಸಾರ್ವನಿಕ ಉದ್ದೇಶಕ್ಕೆ ಕಾಯ್ದಿರಿಸಿದ ಪ್ರದೇಶವನ್ನು ‘ಅಲ್ಲಮ ಪ್ರಭು ಉದ್ಯಾನವನ’ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.
  • ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕನ್ನು ‘ಚನ್ನಮ್ಮನ ಕಿತ್ತೂರು ತಾಲ್ಲೂಕು’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿದೆ.
  • ಜಲಜೀವನ್ ಮಿಷನ್ ಯೋಜನೆಯಡಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಅಂತರಸಂತೆ, ಹಂಪಾಪುರ ಮತ್ತು ವಿವಿಧ ಜನವಸತಿ ಪ್ರದೇಶಗಳಿಗೆ ಹಾಗೂ ಟಿ.ನರಸೀಪುರ ತಾಲ್ಲೂಕಿನ ದೊಡ್ಡಬಾಗಿಲು, ಹಾವೇರಿ ತಾಲ್ಲೂಕಿನ ನೆಗಳೂರು, ಹಾನಗಲ್ ತಾಲ್ಲೂಕಿನ ಕುಡ್ಲ ಮತ್ತಿತರ ಜನವಸತಿ ಹಾಗೂ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
  • ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ ಮೀಸಲಾತಿ) ಗೆ ಸಂಬಂಧಿಸಿದಂತೆ ಭೋವಿ, ಬಂಜಾರ, ಕೊರಮ ಮತ್ತು ಕೊರಚ ಜಾತಿಗಳು ಹಾಗೂ ಅದರ ಪರ್ಯಾಯ ಜಾತಿಗಳು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದ್ದು, ಅದನ್ನು ಹಾಗೆಯೇ ಉಳಿಸಿಕೊಳ್ಳುವಂತೆ ಹಾಗೂ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಅವುಗಳನ್ನು ಮುಂದುವರೆಸುವಂತೆ ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ.
Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ