ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಸರ್ಕಾರವೇ ವೇಮನ ಜಯಂತಿ ಆಚರಿಸಲು ಆದೇಶಿಸಿದೆ: ಸಿ.ಎಂ.ಸಿದ್ದರಾಮಯ್ಯ

ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
  • ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾಗದೆ-ಮನುಕುಲಕ್ಕೆ ಸೇರಿದವರು: ಸಿಎಂ ಸಿದ್ದರಾಮಯ್ಯ

ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ವೇಮನರಾದಿಯಾಗಿ ಬಸವಾದಿ ಶರಣರು ಮನುಕುಲದ ಆಸ್ತಿ. ಪ್ರತೀ ಮಗುವೂ ಹುಟ್ಟುತ್ತಾ ವಿಶ್ವ ಮಾನವ. ಬೆಳೆಯುತ್ತಾ ಅಲ್ಪಮಾನವರಾಗಿ ಬಿಡುತ್ತಾರೆ ಎಂದು ಕುವೆಂಪು ಹೇಳಿರುವ ಮಾತು ಸತ್ಯ. ವೇಮನ ಅವರು ಆಕಸ್ಮಿಕವಾಗಿ ರೆಡ್ಡಿ ಸಮುದಾಯದಲ್ಲಿ ಹುಟ್ಟಿದ್ದರೂ ಅವರು ಇಡಿ ಮನುಕುಲಕ್ಕೆ ಬೇಕಾದವರಾಗಿದ್ದರು ಎಂದು ವಿವರಿಸಿದರು.

ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು.‌ ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು.

ರೆಡ್ಡಿ ಜನ ಸಂಘದ ಶಿಕ್ಷಣ ಸಂಸ್ಥೆಗೆ ಜಮೀನು ಒದಗಿಸಲು ಸರ್ಕಾರ ಸಿದ್ದವಿದೆ. ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪುತ್ಥಳಿಯನ್ನು ವಿಧಾನಸೌಧದಲ್ಲಿ ಹಾಕಲು ಅವಕಾಶ ಕಲ್ಪಿಸಿದ್ದು ನಮ್ಮ ಅವಧಿಯಲ್ಲೇ ಎಂದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಸರ್ಕಾರವೇ ವೇಮನ ಜಯಂತಿ ಆಚರಿಸಲು ಆದೇಶಿಸಿದ್ದೆ . ನಮ್ಮ ಸರ್ಕಾರ ಎಲ್ಲಾ ಜಾತಿ ಮತ್ತು ಧರ್ಮದ ಬಡವರ ಪರವಾಗಿ ಇರುತ್ತದೆ. ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮ ವರ್ಗದವರ ಪರವಾಗಿ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ, ಜಾರಿಗೆ ತರುತ್ತಿದೆ ಎಂದು ವಿವರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ರೆಡ್ಡಿ ಜನಸಂಘದ ಅಧ್ಯಕ್ಷರಾದ ಎಸ್.ಜಯರಾಮ ರೆಡ್ಡಿ, ಗಂಗಾವತಿ ಶಾಸಕರಾದ ಜನಾರ್ಧನರೆಡ್ಡಿ, ಮಾಜಿ ಸಚಿವ ಎಚ್.ಎಂ.ರೇವಣ್ಣ ಉಪಸ್ಥಿತರಿದ್ದರು.

ಲೇಖಕಿ ಹಾಗೂ ಜನಪದ ತಜ್ಞೆ ಡಾ.ಕೆ.ಆರ್.ಸಂಧ್ಯಾ ರೆಡ್ಡಿ ಅವರು ವಿಶೇಷ ಉಪನ್ಯಾಸ ನೀಡಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ