ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನಾನೂ ಒಬ್ಬ ಹಿಂದು, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾನೂ ಒಬ್ಬ ಹಿಂದು, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ

ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.

ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ