ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪ್ರಣಾಳಿಕೆಯಲ್ಲಿ ಪ್ರಸ್ತುತ ಸಾಮಾಜಿಕ‌ ಸಮಸ್ಯೆಗಳಿಗೆ ಪರಿಹಾರ ದೊರಕುವ ರೀತಿಯ ಕಾರ್ಯಕ್ರಮಗಳು: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
  • ದೇಶದಲ್ಲಿ ಆಗಿರುವ ಅಭಿವೃದ್ಧಿ, ಸಾಮಾಜಿಕ ಭದ್ರತೆ ಮತ್ತು ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು
  • ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು
  • ಸಂವಿಧಾನ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ: ಸಿಎಂ ಸಿದ್ದರಾಮಯ್ಯ
  • ಯುವ ಸಮೂಹ-ರೈತರು-ಹಿಂದುಳಿದವರು-ದಲಿತರು- ಮಹಿಳೆಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಪ್ರಣಾಳಿಕೆಯಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ

ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ, ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು ಎಂದು ಮುಖ್ಯಮಂತ್ರಿಗಳು ಪಟ್ಟಿ ಮಾಡಿದರು.

ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನಗಳನ್ನು ನಾವು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013 ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ98 ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಉಳಿದ ಭರವಸೆಗಳನ್ನು ಯಶಸ್ವಿಯಾಗಿ ಜಾರಿ ಮಾಡುತ್ತಿದ್ದೇವೆ ಎಂದರು.

ಎಐಸಿಸಿ ಮುಖಂಡರೂ, ಪ್ರಣಾಳಿಕೆ ಸಮಿತಿ ಸದಸ್ಯರೂ ಆದ ರಾಜಾ, ನೀತಿ ಆಯೋಗದ ಉಪಾಧ್ಯಕ್ಷರಾದ ರಾಜೀವ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾದ ಮೆಹರೂಜ್ ಖಾನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.‌

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ