ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸತ್ಯ ಶಾಶ್ವತ: ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ: ಸದನದಲ್ಲಿ ಹೆಮ್ಮೆಯಿಂದ ಮಾತನಾಡಿ: ಸಿಎಂ ಕರೆ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಬಿಜೆಪಿ ಮತ್ತು ಜೆಡಿಎಸ್‌ ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ: ಸಿ.ಎಂ.ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್‌ ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಏಟ್ರಿಯಾ ಹೋಟೆಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ ಸದನದಲ್ಲಿ ಬಹಳ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಶಾಸಕರು ಸದನದಲ್ಲಿ ಪರಿಣಾಮಕಾರಿಯಾಗಿ, ಕಡ್ಡಾಯವಾಗಿ ಭಾಗವಹಿಸುವ ಮೂಲಕ ಸದನದ ಸಮಯವನ್ನು ಅರ್ಥಪೂರ್ಣಗೊಳಿಸಿ. ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ. ಏಕೆಂದರೆ ಲೋಕಸಭಾ ಚುನಾವಣೆಗೆ ಜನರ ಬಳಿಗೆ ಹೋಗಿ ಮುಖ ತೋರಿಸಲು ಬಿಜೆಪಿಗೆ ಅಭಿವೃದ್ಧಿ ವಿಚಾರಗಳೇ ಇಲ್ಲ. ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯನ್ನು ಮರೆತು ಈಗ ಚುನಾವಣೆ ವೇಳೆ ಅಯೋಧ್ಯೆ ವಿಚಾರ ಒಂದನ್ನೇ ಮುಂದಿಟ್ಟುಕೊಂಡು ಹೊರಟಿದ್ದಾರೆ. ಈ ಸತ್ಯ ನಾಡಿನ‌ ಜನತೆಗೆ ಮನವರಿಕೆಯಾಗಿದೆ. ಆದರೆ ಸದನದ ಕಡತಕ್ಕೆ ಹೋಗಲಿ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ‌. ಇದಕ್ಕೆ ಸತ್ಯದ ಮೂಲಕ, ಅಧಿಕೃತ ಅಂಕಿ ಅಂಶಗಳ ಮೂಲಕ ಸ್ಪಷ್ಟ ಉತ್ತರ ಕೊಡಿ ಎಂದು ಶಾಸಕರಿಗೆ ಕರೆ ನೀಡಿದರು.

ಬಿಜೆಪಿ – ಜೆಡಿಎಸ್ ಗ್ಯಾರಂಟಿ ಯೋಜನೆಗಳ 5 ಕೋಟಿ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ನಾವು ಈ ಜನರ ಪರವಾಗಿ ನಿಂತಿದ್ದೇವೆ. ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಈ ಜನರ ಹಕ್ಕು. ಇದನ್ನು ನಾವು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ರಾಜ್ಯ ಸಭೆಗೆ ರಾಜ್ಯದಿಂದ ಅಭ್ಯರ್ಥಿಗಳಾಗಿರುವ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಮತ್ತು ಅಜಯ್ ಮಾಕನ್ ಅವರಿಗೆ ಅಭಿನಂದಿಸಲಾಯಿತು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ