ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಾಂಸ್ಕೃತಿಕ ನಾಯಕ ಘೋಷಣೆ; ವಿಶ್ವ ಬಸವ ಧರ್ಮ ಟ್ರಸ್ಟ್‌ನಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಕಲ್ಯಾಣದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಕಲ್ಯಾಣದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿದರು.

ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನಿಸಲಾಯಿತು.

ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ , ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.

ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹರಸಿದರು.

ಸನ್ಮಾನದ ಬಳಿಕ ಮಾತನಾಡಿದ, ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದೇವರು, “
ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದು ಏಕೈಕ ನಾಯಕ ಸಿದ್ದರಾಮಯ್ಯ ಎಂದು ಹೇಳಿದರು.

ಮಹಿಳಾ ವಿವಿಗೆ ಅಕ್ಕ ಮಹಾದೇವಿ ಹೆಸರಿಟ್ಟಿದ್ದು ಏಕೈಕ ನಾಯಕ ಸಿದ್ದರಾಮಯ್ಯ, ಬಸವ ತತ್ವದ ಆಧಾರದಲ್ಲಿ ಅನ್ನ ಭಾಗ್ಯ ಸೇರಿ ಹಲವು ಭಾಗ್ಯಗಳನ್ನು ಕೊಟ್ಟಿದ್ದೇನೆ ಎಂದು ಸಾರಿದವರು ಏಕೈಕ ನಾಯಕ ಸಿದ್ದರಾಮಯ್ಯ ಎಂದು ಶ್ಲಾಘಿಸಿದರು.

ಅನುಭವ ಮಂಟಪದಲ್ಲಿ 12 ನೇ ಶತಮಾನದಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಎಂದು ಬಸವಣ್ಣನವರು ಘೋಷಿಸಿದರು. ಬಸವಣ್ಣನವರು ಮಾಡಿದ ಘೋಷಣೆಗೆ ಆಧುನಿಕ ಕರ್ನಾಟಕದಲ್ಲಿ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಎಂದು ಮುದ್ರೆ ಒತ್ತಿದ ಏಕೈಕ ನಾಯಕ ಧೀಮಂತ ನಾಯಕ, ಬಸವಣ್ಣನವರ ಅಪ್ಪಟ ಅನುಯಾಯಿ ಸಿದ್ದರಾಮಯ್ಯ ಅವರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಸವಣ್ಣನವರು ತಮ್ಮ ರಾಜಕೀಯಕ್ಕೆ ಮಾದರಿ ಎಂದು ಘೋಷಿಸಿಕೊಂಡ, ಅದನ್ನೇ ಪಾಲಿಸುತ್ತಿರುವ ಏಕೈಕ ನಾಯಕರು ನಮ್ಮೆಲ್ಲರ ಅಭಿಮಾನದ ಸಿದ್ದರಾಮಯ್ಯ ಅವರು ಎಂದು ಪ್ರಶಂಸಿಸಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷರಾದ ಗೋ.ರೂ.ಚ ಮಾತನಾಡಿ, ಸಮಾಜದಲ್ಲಿ ಧರ್ಮ, ದೇವರ ಹೆಸರಲ್ಲಿ ಅಂದಶ್ರದ್ದೆ, ದ್ವೇಷದ ವಾತಾವರಣ ಹೆಚ್ಚಿಸುತ್ತಿರುವುದು ಬೇಸರದ ಸಂಗತಿ ಎಂದರು.

ಮುಂದುವರೆದು ಮಾತನಾಡಿ, ಸಿದ್ದರಾಮಯ್ಯ ಅವರು ನಾಡಿನ ಇತಿಹಾಸದಲ್ಲಿ ಅಪೂರ್ವ ಘೋಷಣೆ ಮಾಡಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದರು. ಬಸವ ಸಿದ್ದಾಂತದಲ್ಲಿ ಸಿದ್ದರಾಮಯ್ಯ ಅವರು ಇಟ್ಟಿರುವ ಬದ್ಧತೆ ಕಾರಣಕ್ಕೆ, ಸಾಮಾಜಿಕ ನ್ಯಾಯದ ಪರ ಇವರು ಬದ್ಧತೆ ಕಾರಣಕ್ಕೆ ಸಿದ್ದರಾಮಯ್ಯ ಅವರ ದಿಟ್ಟತನಕ್ಕಾಗಿ ನಮಗೆ ಇವರ ಬಗ್ಗೆ ಹೆಮ್ಮೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕರಾದ
ಡಾ. ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ
ಸಚಿವರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿಗಳಾದ
ಶ್ರೀ ಈಶ್ವರ್ ಖಂಡ್ರೆ ಅವರು ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್,
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಡಾ. ಗೊ.ರು. ಚನ್ನಬಸಪ್ಪ,
ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿ , ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್,
ಪೌರಾಡಳಿತ, ಹಜ್ ಸಚಿವರಾದ ಶ್ರೀ ರಹೀಖಾನ್,
ಮಾಜಿ ಸಚಿವರಾದ ಶ್ರೀ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ವಿಜಯ್ ಸಿಂಗ್, ಶಾಸಕ ಚನ್ನಾರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿಶ್ವಬಸವ ಧರ್ಮ ಟ್ರಸ್ಟ್‍ನ ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ವೈಭವದ ವೇದಿಕೆಯಲ್ಲಿ ಮುಖ್ಯಮಂತ್ರಿಗಳು ಸನ್ಮಾನಿಸಲ್ಪಟ್ಟರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ