ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

“ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಅವಕಾಶ ಸಿಕ್ಕಿದ್ದೇ ನನ್ನ ಸೌಭಾಗ್ಯ”

ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣರ ಗುರಿಯಾಗಿತ್ತು. ಹೀಗಾಗಿ ಬುದ್ದ, ಬಸವ, ಅಂಬೇಡ್ಕರ್ ನನಗೆ ಮಾರ್ಗದರ್ಶಕರು. ಇವರ ವಿಚಾರಗಳು ಇಂದು, ನಾಳೆ ಮಾತ್ರವಲ್ಲ ಯಾವತ್ತೂ ಶಾಶ್ವತ ಎಂದು ಮುಖ್ಯಮಂತ್ರಿ ಹೇಳಿದರು.

ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು: ಸಿ.ಎಂ.ಸಿದ್ದರಾಮಯ್ಯ

ಬಸವಣ್ಣ ಈ ಮಣ್ಣಿನ ಸಾಂಸ್ಕೃತಿಕ ಸ್ಫೂರ್ತಿ ಆಗಿರುವುದರಿಂದ ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಬಸವಣ್ಣರ ಭಾವಚಿತ್ರ ಕಡ್ಡಾಯಗೊಳಿಸಿದೆ: ಸಿ.ಎಂ

ಲಕ್ಷಾಂತರ ಕನ್ನಡಿಗರ ಸಾಕ್ಷಿಯಾಗಿ ನಾನು ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ

ನನಗೆ ಸಿಕ್ಕ ಈ ಚಿರಸ್ಮರಣೀಯ ಸನ್ಮಾನವನ್ನು 7 ಕೋಟಿ ಕನ್ನಡಿಗರಿಗೆ ಅರ್ಪಿಸುತ್ತೇನೆ: ಸಿ.ಎಂ ಸಿದ್ದರಾಮಯ್ಯ ಅವರ ಧನ್ಯತಾ ನುಡಿ

ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶ ಸಮುದಾಯದಿಂದ ಅಭೂತಪೂರ್ವ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣರ ಗುರಿಯಾಗಿತ್ತು. ಹೀಗಾಗಿ ಬುದ್ದ, ಬಸವ, ಅಂಬೇಡ್ಕರ್ ನನಗೆ ಮಾರ್ಗದರ್ಶಕರು. ಇವರ ವಿಚಾರಗಳು ಇಂದು, ನಾಳೆ ಮಾತ್ರವಲ್ಲ ಯಾವತ್ತೂ ಶಾಶ್ವತ ಎಂದರು.

ಇಡಿ ಜಗತ್ತಿಗೆ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಪರಿಚಯಿಸಿದ್ದು ಬಸವಾದಿ ಶರಣರು. ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಇರುವ ಮೌಲ್ಯಗಳಲ್ಲೆವೂ ಬಸವಾದಿ ಶರಣರ ಆಶಯಗಳಲ್ಲಿವೆ ಎಂದು ವಿವರಿಸಿದರು.

ಕಾಯಕ, ಉತ್ಪಾದನೆ, ದಾಸೋಹ ಬಸವಾದಿ ಶರಣರ ಆಶಯ. ಈ ಮೂಲಕ ಸಮಬಾಳು, ಸಮಪಾಲು ಎನ್ನುವುದನ್ನು 12 ನೇ ಶತಮಾನದಲ್ಲೇ ಸಾರಿದ್ದಾರೆ ಎಂದರು.

ಬಸವಣ್ಣ ಈ ಮಣ್ಣಿನ ಸಾಂಸ್ಕೃತಿಕ ಸ್ಫೂರ್ತಿ ಆಗಿರುವುದರಿಂದ ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಬಸವಣ್ಣರ ಭಾವಚಿತ್ರ ಕಡ್ಡಾಯಗೊಳಿಸಿದೆ. ಲಕ್ಷಾಂತರ ಕನ್ನಡಿಗರ ಸಾಕ್ಷಿಯಾಗಿ ನಾನು ಬಸವ ಜಯಂತಿಯಂದೇ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ ಎಂದರು.

ಬಸವಾದಿ ಶರಣರ ತತ್ವಗಳಿಗೆ ವಿರುದ್ಧವಾಗಿ ಇವತ್ತಿನ ವಿದ್ಯಾವಂತರು ಕಂದಾಚಾರಗಳನ್ನು ಆಚರಿಸುತ್ತಿದ್ದಾರೆ. ಆತ್ಮಸಾಕ್ಷಿ ವಿರುದ್ಧವಾಗಿ ನಡೆದುಕೊಳ್ಳಬಾರದು ಎನ್ನುವುದು ವಚನಗಳ ಆಶಯ. ಎಲವೋ ಎಂದರೆ ನರಕ. ಅಯ್ಯಾ ಎಂದರೆ ಸ್ವರ್ಗ ಎಂದು ಶರಣರು ಹೇಳಿದ್ದಾರೆ. ದಯೆಯೆ ಇಲ್ಲದ ಧರ್ಮ ಯಾವುದಯ್ಯ ಎನ್ನುವ ಮೂಲಕ ನಿಜವಾದ ಧರ್ಮ ಎಂದರೆ ಏನು ಎನ್ನುವುದನ್ನು ತಿಳಿಸಿದ್ದಾರೆ.

ಶರಣರು ಸಂಸ್ಕೃತವನ್ನು ಸಾರಾಸಗಟಾಗಿ ತಿರಸ್ಕರಿಸಿ ಮೊದಲ ಬಾರಿಗೆ ಜನರ ಭಾಷೆಯಲ್ಲಿ, ಜನರಾಡುವ ಭಾಷೆಯಲ್ಲಿ ಧರ್ಮದ ಮೌಲ್ಯಗಳನ್ನು ಸಾರಿದರು. ದಯೆಯೆ ಧರ್ಮದ ಮೂಲ ಎನ್ನುವ ಮಾತು ಎಷ್ಟು ಸರಳವಾಗಿದೆ. ಇದೇ ಜನರ ಭಾಷೆ ಎಂದರು.

ಬಸವಾದಿ ಶರಣರು ನುಡಿದಂತೆ ನಡೆದರು. ನಡೆದಂತೆ ನುಡಿದರು. ಇದೇ ನಮ್ಮ ಸರ್ಕಾರಕ್ಕೆ ಮಾದರಿ. ನಾವು ಚುನಾವಣೆ ವೇಳೆಯಲ್ಲಿ ಕೊಟ್ಟ ಆಶ್ವಾಸನೆಗಳನ್ನು ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ ಈಡೇರಿಸಿ, ನಿಮ್ಮ ಮತಕ್ಕೆ ಗೌರವ ನೀಡಿ ಮತ್ತೆ ನಿಮ್ಮ ಮುಂದೆ ಬಂದು ನಿಂತಿದ್ದೇವೆ ಎಂದರು.

ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನಿಸಲಾಯಿತು.

ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ , ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.

ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹರಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ