ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಬಿಜೆಪಿ ಸುಳ್ಳು ಹೇಳುತ್ತಿದೆ.

ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? , ಏನು ಮಾಡಿಲ್ಲ ಎಂದರೆ ಏನು? .ಗ್ಯಾರಂಟಿಗಳನ್ನು ಒಳಗೊಂಡಂತೆ 1.ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಿದೆ ಎಂದರು.

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ತಿಳಿದೂ ಇಲ್ಲ

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ . ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ ಎಂದು ಮುಖ್ಯಂತ್ರಿಗಳು ಪ್ರಶ್ನಿಸಿದರು.

ನಿನ್ನೆ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ