ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮುಖ್ಯಮಂತ್ರಿಗೆ ಎಸ್ಸೆಸ್ಸೆಲ್ಸಿಯಲ್ಲಿ 1 ರ್‍ಯಾಂಕ್‌ ಪಡೆದ ಅಂಕಿತಾ ಪತ್ರ

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ

ಎಸ್‌.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನ್ನನ್ನು ಬೆಂಗಳೂರಿಗೆ ಆಹ್ವಾನಿಸಿ, ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾಳೆ.ಜೊತೆಗೆ ಮುಖ್ಯಮಂತ್ರಿಯವರೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆಯ ರೂವಾರಿ ಎಂಬುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಾಳೆ. ಈ ಶಾಲೆಗಳಿಂದ ಅನೇಕ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿವೆ ಎಂದು ಬಣ್ಣಿಸಿದ್ದಾಳೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಂಕಿತಾಳನ್ನು ಬೆಂಗಳೂರಿಗೆ ಆಹ್ವಾನಿಸಿ, ಸನ್ಮಾನಿಸಿದ್ದಲ್ಲದೆ, ಮುಂದಿನ ಶಿಕ್ಷಣಕ್ಕೆ ಬೆಂಬಲ ನೀಡುವುದಾಗಿಯೂ ಘೋಷಿಸಿದ್ದನ್ನು ಸ್ಮರಿಸಬಹುದು. ಈ ಹಿನ್ನೆಲೆಯಲ್ಲಿ ಅಂಕಿತಾ ಮುಖ್ಯಮಂತ್ರಿಗಳಗೆ ತನ್ನ ಅಂತರಂಗವನ್ನು ವ್ಯಕ್ತಪಡಿಸಿ ಬರೆದಿರುವ ಪತ್ರ 👇ಇಲ್ಲಿದೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ