ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಾರದಲ್ಲಿ ಆರು ದಿನ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಚಾರಿತ್ರಿಕ ಮುಂದಾದ ಅಜೀಂ ಪ್ರೇಮ್ ಜಿ ಫೌಂಡೇಷನ್

  • ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ
  • ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ

ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ