ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪ್ಯಾರೀಸ್ ಒಲಿಂಪಿಕ್ಸ್ | ಭಾರತ ಪ್ರತಿನಿಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ ಮಂಜೂರು ಮಾಡಿದ ಸಿಎಂ

ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.

ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ.

ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ.

ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಒಂಬತ್ತು ಮಂದಿಗೆ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಎಂದು ತಿಳಿಸಿರುವ ಡಾ.ಕೆ.ಗೋವಿಂದರಾಜು ಅವರು ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿಕೊಟ್ಟು ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ