ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ: ಸಿ ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ "ನಮ್ಮ‌ಅಭಿನಂದನೆ" ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ “ನಮ್ಮ‌ಅಭಿನಂದನೆ” ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಅಂಬೇಡ್ಕರ್ , ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಕರೆ ನೀಡಿದರು.

ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ ಎಂದರು.

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕರಾದ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ