ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ: ಸಿಎಂ ಸಿದ್ದರಾಮಯ್ಯ

ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು: ಸಿಎಂ

ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದ ಎಂದರು.

ರಾಯಣ್ಣನ ದೇಶಪ್ರೇಮ, ಜನಪ್ರೇಮವನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಿದ್ದೇವೆ. ನೀವೆಲ್ಲಾ ಸಂಗೊಳ್ಳಿಗೆ ಭೇಟಿ ನೀಡಿ ಎಂದು ಕರೆ ನೀಡಿದರು.

ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಮುಖ್ಯಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷರಾದ ಡಾ.ಸಣ್ಣಕ್ಕಿ ಅವರು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ