ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ

ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.

ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು ಎಂದು ಹೇಳಿದರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು.

ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ