ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

2026-27 ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ

ಯೋಜನೆಯ ಪರಿಷ್ಕೃತ ಅಂದಾಜು 23252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16152ಕೋಟಿ ರೂ.ಗಳನ್ನು ವೆಚ್ಚ ವಾಗಿದ್ದು, ಇನ್ನುಳಿದ 6-7 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.

ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು ಚಿಕ್ಕಬಳ್ಳಾಪುರದಲ್ಲಿ ತಾನೇ ನಿರ್ವಹಿಸಿ, ಇಂದು ಮೊದಲನೇ ಹಂತದ ಯೋಜನೆಯನ್ನು ಸಂತೋಷದಿಂದ ಉದ್ಘಾಟಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.ಈ ಯೋಜನೆಯ ಪರಿಷ್ಕೃತ ಅಂದಾಜು 23252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16152ಕೋಟಿ ರೂ.ಗಳನ್ನು ವೆಚ್ಚ ವಾಗಿದ್ದು, ಇನ್ನುಳಿದ 6-7 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.

ಸಕಲೇಶಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು,ಯೋಜನೆಗೆ ಇಲ್ಲಿನ ನೀರು ಬಳಸಿಕೊಳ್ಳಲಾಗುತ್ತಿದೆ. ಈ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಬೇಡಿಕೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನೀರು ಕೊರತೆಯಿರುವ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದಾಗಿದ್ದು, ರಾಜ್ಯದ ಜನರಿಗೆ ಪ್ರಯೋಜನಕಾರಿಯಾಗಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ