ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

100 ನೂತನ ಬಿಎಂಟಿಸಿ ಬಸ್ ಗಳ ಲೋಕಾರ್ಪಣೆ; ಒಟ್ಟು 840 ನೂತನ‌ಬಸ್ ಗಳು ಬಿಎಂಟಿಸಿ ಸೇರಲಿವೆ: ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ಬಸ್ ಗಳು ಬಿಎಂಟಿಸಿ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದರು.

ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.

‌ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ