ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರ ಸಾಧನೆ ಸ್ತುತ್ಯಾರ್ಹ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಗೀತ ಕ್ಷೇತ್ರದಲ್ಲಿ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು,ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಇಂದು ಹಂ.ಪಾ .ನಾಗರಾಜಯ್ಯ ನವರಿಂದ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಇಂದು ದಸರಾ ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ ಎಂದರು.

ಮೈಸೂರು ಸಾಂಸ್ಕೃತಿಕ ನಗರ

ಮೈಸೂರನ್ನು ಸಾಂಸ್ಕೃತಿಕ ನಗರ ಎಂದು ಗುರುತಿಸಲಾಗುತ್ತದೆ. ರಾಜರ ಕಾಲದಿಂದಲೂ ಕೂಡ ಸಂಗೀತ, ನಾಟ್ಯ, ವಿವಿಧ ಕಲೆಗಳಿಗೆ ಪ್ರೋತ್ಸಾಹಿಸಲಾಗುತ್ತಿತ್ತು. ಈ ಪರಂಪರೆಯನ್ನು ಸರ್ಕಾರವೂ ಮುಂದುವರೆಸಿಕೊಂಡು ಬಂದಿದೆ. ಸಂಗೀತ ಸಾಹಿತ್ಯ ಕಲೆಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಅಪ್ರತಿಮ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಕರ್ತವ್ಯ. ಈ ಬಾರಿ ಸರ್ಕಾರ ದಸರಾ ಉತ್ಸವವನ್ನು ವೈಭವಯುತವಾಗಿ ಆಯೋಜಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ