ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ