ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೊರೊನಾ ಕಾಲದಲ್ಲಿ 200 ಕೋಟಿ ರೂ.ಗೂ ಹೆಚ್ಚಿನ ಹಗರಣ, ಕುನ್ಹಾ ವರದಿಯ ನಿರೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ತೋರಣಗಲ್ಲು ಪಟ್ಟಣದ ಜೆಎಸ್‌ಡಬ್ಲ್ಯೂ ಅತಿಥಿ ಗೃಹದಲ್ಲಿ ಶನಿವಾರ ಸಂಜೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಕೋರೋನ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರ ನೇತೃತ್ವದ ಆಯೋಗ ರಚಿಸಲಾಗಿದೆ, ವರದಿ ಇನ್ನೂ ಕೈ ಸೇರಿಲ್ಲ, ಪತ್ರಿಕೆಯಲ್ಲಿ ಓದಿದ್ದನ್ನು ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.‌

ತೋರಣಗಲ್ಲು ಪಟ್ಟಣದ ಜೆಎಸ್‌ಡಬ್ಲ್ಯೂ ಅತಿಥಿ ಗೃಹದಲ್ಲಿ ಶನಿವಾರ ಸಂಜೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಮಾಜಿ ಸಿ.ಎಂ.ಯಡಿಯೂರಪ್ಪ ಅವರು ಇದೆಲ್ಲ ಸುಳ್ಳು ಎನ್ನುತ್ತಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯವಿದೆ. ಸತ್ಯಾಸತ್ಯತೆ ಬಯಲಾಗಲಿದೆ.‌ಬಿಜೆಪಿಯವರು ಎಲ್ಲವನ್ನೂ ಸುಳ್ಳು ಅಂತಾರೆ. ಅವರು ಸುಳ್ಳಿನ ಪಿತಾಮಹ, ಯಡಿಯೂರಪ್ಪ ಅವರು ಸಿ.ಎಂ.ಆಗಿದ್ದಾಗ ಕೋವಿಡ್ ಹಗರಣಗಳನ್ನು ನಾನು ವಿರೋಧಪಕ್ಷದ ನಾಯಕನಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೆ. ಆಯೋಗದ ವರದಿ ಬರಲಿ, ನಂತರ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಆಕ್ಸಿಜನ್ ಕೊರತೆಯಿಂದ ಜನರು ಮೃತಪಟ್ಟಿರುವ ದುರ್ಘಟನೆಗಳು ನಡೆದವು. ಇದನ್ನೂ ಸಚಿವರಾಗಿದ್ದ ಸುಧಾಕರ್ ಅವರು ಸುಳ್ಳು ಸುಳ್ಳು ಎಂದರು. ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ ಮೇಲೆ ಅಲ್ಲಿ ಸಮಸ್ಯೆ ಸರಿಪಡಿಸಿ ಜನರಿಗೆ ಅನುಕೂಲ ಮಾಡಲಾಯಿತು ಎಂದರು.

ಪತ್ರಿಕಾಗೋಷ್ಠಿಯ ಇತರೆ ಮುಖ್ಯಾಂಶಗಳು…

  • ಸಾಲು ಸಾಲು ಹಗಣರಾಗಲ್ಲಿ ಸಿಲುಕಿದ್ದು, ಶೀಘ್ರದಲ್ಲೇ ಸಿ.ಎಂ.ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಉತ್ತರಿಸಿದ ಅವರು, ನಾನು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳುವವನು.
  • ನಾನು ಸಣ್ಣ ತಪ್ಪೂ ಮಾಡಿಲ್ಲ, ಮಾಡೋದು ಇಲ್ಲ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.‌
  • ಯತ್ನಾಳ್ ಅವರು ತಮ್ಮ ವಿರುದ್ಧ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಯಡಿಯೂರಪ್ಪ ಅವರು 2 ಸಾವಿರ ಕೋಟಿ ಕೊಟ್ಟು ಮುಖ್ಯಮಂತ್ರಿ‌ ಆದ್ರು.‌ ಇವರ ಪುತ್ರ ವಿಜಯೇಂದ್ರ ಕೂಡ ದುಡ್ಡು ಕೊಟ್ಟೇ ಪಕ್ಷದ ಅಧ್ಯಕ್ಷ ಆಗಿದ್ದು ಅಂತ ಯತ್ನಾಳ್ ಅವರೇ ಹೇಳಿದ್ದಾರೆ. ಇವರಿಗೆ ಸಾವಿರ ಸಾವಿರ ಕೋಟಿ ಎಲ್ಲಿಂದ ಬಂತು? ಇದರ ಸತ್ಯಾಸತ್ಯತೆ ಕೂಡ ಬಯಲಾಗಬೇಕು ಎಂದರು.
  • ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಅಂತ ದೇವೇಗೌಡರು ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರ ಮಾತು ಸುಳ್ಳು.‌ ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ಮಿಸ್ಸಾಗದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕ್ತೀವಿ ಎಂದರು.
  • ಸಂಡೂರಿನ ಎಲ್ಲಾ ಪಂಚಾಯ್ತಿಗಳಿಗೂ ಪ್ರಚಾರಕ್ಕೆ ಹೋಗಿ ಬಂದಿದ್ದೀನಿ. ನಿರೀಕ್ಷೆ ಮೀರಿ ಜನರ ಸ್ಪಂದನೆ ಇದೆ. ಅನ್ನಪೂರ್ಣ ತುಕಾರಾಮ್ ಅವರು ಭರ್ಜರಿ ಗೆಲ್ಲುವುದು ಖಚಿತ‌ ಎಂದು ಭರವಸೆ ವ್ಯಕ್ತಪಡಿಸಿದರು.
  • ಬಿಜೆಪಿಯವರು ವಕ್ಫ್ ವಿಚಾರವನ್ನು ಉಪಚುನಾವಣೆ ವೇಳೆಯಲ್ಲೇ ಕೃತಕವಾಗಿ ಸೃಷ್ಟಿಸಿರುವುದರ ಹಿಂಂದಿನ ಉದ್ದೇಶ ಏನು ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ವಕ್ಫ್ ಆಸ್ತಿ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲೇ ಬಿಜೆಪಿ ಘೋಷಿಸಿದೆ. ಬಿಜೆಪಿ ಸರ್ಕಾರವೇ 216 ಮಂದಿ ಒಕ್ಕಲೆಬ್ಬಿಸಲು ನೋಟಿಸ್ ನೀಡಿತ್ತು. ಈಗ ನೋಟಿಸ್ ನೀಡಿದವರೇ ಸುಳ್ಳು ಹೇಳಿಕೆ ನೀಡುತ್ತಾ, ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ಇದು ನಮ್ಮ‌ ಸ್ಪಷ್ಟ ತೀರ್ಮಾನ.‌ ನೋಟಿಸ್ ಗಳನ್ನು ಹಿಂಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದ್ದೇನೆ.
  • ಬಿಜೆಪಿ ಅವರಿಗೆ ಮನ ಮರ್ಯಾದೆ ಇಲ್ಲ, ಚುನಾವಣೆ ಪ್ರಣಾಳಿಕೆಯಲ್ಲಿ ಅವರೇ ಹೇಳಿದ್ರು, ರಾಜಕೀಯಕ್ಕಾಗಿ ವಕ್ಫ್ ಕುರಿತು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದರು.
  • ರಾಜ್ಯದಲ್ಲಿ 24 ಗಂಟೆ ಗಣಿಗಾರಿಕೆಗೆ ಅವಕಾಶ ನೀಡುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ಆ ರೀತಿ ಯಾವ ಪ್ರಸ್ತಾಪವೂ ಇದುವರೆಗೂ ನನ್ನ ಗಮನಕ್ಕೆ ಬಂದಿಲ್ಲ. ನಾವು ಹೋರಾಟ ಮಾಡಿದ್ದು ಅಕ್ರಮ ಗಣಿಗಾರಿಕೆಯ ವಿರುದ್ಧವೇ ಹೊರತು , ಗಣಿಗಾರಿಕೆ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದರು.
  • ಸಚಿವ ಸಂತೋಷ್ ಲಾಡ್, ಸಂಸದ ಈ.ತುಕಾರಾಮ್ ಅವರು ಉಪಸ್ಥಿತರಿದ್ದರು.
Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ