ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನವದೆಹಲಿಯಲ್ಲಿ ನಿರ್ಮಿಸಿರುವ ಕರ್ನಾಟಕ ಭವನ -1 (ಕಾವೇರಿ)


ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತಾಶ್ರಯಯದಲ್ಲಿ ಆಯೋಜಿಸಿರುವ ನವದೆಹಲಿಯಲ್ಲಿ ನಿರ್ಮಿಸಿರುವ ಕರ್ನಾಟಕ ಭವನ -1 (ಕಾವೇರಿ) ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಗೌರವಾನ್ವಿತ ಆಹ್ವಾನಿತರಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸಿ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಾನ್ಯ ಸಮಾಜಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು, ಮಾನ್ಯ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು . 

ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ ಬಾಬಣ್ಣ ಹುಕ್ಕೇರಿ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಕಾರ್ಯಕ್ರಮದಲ್ಲಿ ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸರ್ಕಾರದ ಕಾರ್ಯದರ್ಶಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ