ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ, ಜಾರಿ ಮಾಡ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈಗ ಎಲ್ಲರೂ ಮೀಸಲಾತಿ ಪರವಾಗಿದ್ದಾರೆ. ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ

ಬೆಂಗಳೂರು: ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡ್ತೀವಿ. ನೀವು ಬೇಡ ಅಂದರೂ ನಾವು ಜಾರಿ ಮಾಡ್ತೀವಿ. ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ. ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ವಿವರಿಸಿದರು.

ನರೇಂದ್ರ ಮೋದಿಯವರು EWS ಹೆಸರಲ್ಲಿ ಶೇ. 10 ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ ಎಂದು ವಿವರಿಸಿದರು. ಸುಪ್ತ ಪ್ರತಿಭೆ ಹೊರಗೆ ತರುವ ಶಿಕ್ಷಣದಿಂದ ಯುವ ಸಮೂಹ ಸ್ವಾಭಿಮಾನಿಗಳಾಗಿ ಬೆಳೆಯಲು ಸಾಧ್ಯ ಎಂದರು. 

ನಮ್ಮ ರಾಜ್ಯದಲ್ಲಿ ಮತ್ತು ತೆಲಂಗಾಣ, ಆಂಧ್ರದಲ್ಲಿ ಮಾತ್ರ SCP-TSP ಕಾಯ್ದೆ  ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿಈ ಕಾಯ್ದೆ ತಂದೇ ಇಲ್ಲ ಏಕೆ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ ಎಂದು ಪ್ರಶ್ನಿಸಿದರು. 

ನಾವು ಜಾರಿ ಮಾಡಿರುವ ಐದೂ ಗ್ಯಾರಂಟಿಗಳೂ ಜನರ ಕೈಯಲ್ಲಿ ಹಣ ಇರಬೇಕು, ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಎನ್ನುವ ನಮ್ಮ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸಿದೆ ಎಂದರು. ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ ಈ ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವ ವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದರು. 

ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲಾ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದೆ ಎಂದು ವಿವರಿಸಿದರು.

ಹೀಗಾಗಿ ಮಹಾನ್ ಚೇತನ ಬಾಬು ಜಗಜೀವನ್ ರಾಮ್ ಅವರ ಕಾಳಜಿಗಳನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟರುವ ಹೆಜ್ಜೆ ಗುರುತುಗಳನ್ನು ಪಾಲಿಸಬೇಕು ಎಂದರು. ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು ಎಂದರು. ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಹೀಗಾಗಿ ಇವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ