ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ

ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು: ಸಿಎಂ

ಬೆಳಗಾವಿ ಏ 20: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.

ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯಿತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು.

ಒಣ ಬೇಸಾಯ‌ ಮಾಡುವ ರೈತರೇ ಹೆಚ್ಚು: ಸಮಗ್ರ ಕೃಷಿ-ಕೃಷಿಕರ ಪ್ರಗತಿಗೆ ಕ್ರಮ

ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು.ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು ಶುರು ಮಾಡಿದೆವು ಎಂದರು.

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ

ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ