ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು

ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ, ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಅಶೋಕ್ ಅವರು ಯಾವತ್ತಾದರೂ ಸತ್ಯವನ್ನು  ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು.  

ಕಾಂಗ್ರೆಸ್ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಯಾರೂ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು  ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ  ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ