ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ

ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.

ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳಿರುವ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಅವರು ಮಾತನಾಡಿದರು.

ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿದ್ದು, ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ