ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿ.ಎಂ ಸಿದ್ದರಾಮಯ್ಯ

ನಾಗಮಂಗಲದ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ: ಕ್ರೆಡಿಟ್ ತಗೊಂಡಿದ್ದು ಬೇರೆ ಯಾರೋ: ಸಿಎಂ

ಮಂಡ್ಯ (ನಾಗಮಂಗಲ) ಏ 22: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ

ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.

ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದರು. ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ