ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ, ಏಪ್ರಿಲ್ 24: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಉಗ್ರರನ್ನು ಮಟ್ಟಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ

ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು .

ಬಂದೋಬಸ್ತು ಸಡಿಲಗೊಳಿಸಬಾರದಿತ್ತು

ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದರು.

ಉಗ್ರರನ್ನು ಹಾಕಲು ಎಲ್ಲ ಸಹಕಾರ

ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಪುಲ್ವಾಮಾ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು.ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು.ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಸರ್ಕಾರದ ಜವಾಬ್ದಾರಿ ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಪಕ್ಷ ಕೊಡುತ್ತದೆ ಎಂದರು.

10ಲಕ್ಷ ಪರಿಹಾರ

ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೋಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.

ಕಾದು ನೋಡಿ

ಬಜೆಟ್ ನಲ್ಲಿ ಜಿಲ್ಲೆಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯ ನಂತರ ಮಾತನಾಡುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರದ ರಾಜಕೀಯ ದ್ವೇಷ

ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದರೆ ತಕ್ಷಣವೇ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಬಗ್ಗೆ ಪ್ರಧಾನಿ ,ಗೃಹ ಸಚಿವರನ್ನು ಭೇಟಿ ಮಾಡಿದ್ದರೂ ಏನು ಆಗಿಲ್ಲ. ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಅನುದಾನವನ್ನು ಕೊಡುತ್ತಿಲ್ಲ. 2023-24 ರಲ್ಲಿ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿ ಅನುದಾನವನ್ನು ಈವರೆಗೆ ಕೊಟ್ಟಿಲ್ಲ. ಇದು ರಾಜಕೀಯ ದ್ವೇಷದಂತೆ ಕಾಣುತ್ತದೆ ಎಂದರು.

ಚಾಮರಾಜನಗರ ಜಿಲ್ಲೆಯ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ

ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು ಹಾಗು ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ