ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ, ಏಪ್ರಿಲ್ 25 : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ

ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು.

ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ

ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.

ಬಿಜೆಪಿಯವರ ಮೇಲೆ ಇಡಿ ದಾಳಿ ಆಗುವುದಿಲ್ಲ

ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ. ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.

ನೂತನ ಇಂದಿರಾ ಕ್ಯಾಂಟೀನ್‌ ಲೋಕಾರ್ಪಣೆ

ಇದೇ ವೇಳೆ ಹನೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಳಿಸಿ, ಉಪಹಾರ ಸವಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ