ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪರಿಸರ ಕ್ಷೇತ್ರಕ್ಕೆ ಹಾಗೂ ಕರ್ನಾಟಕಕ್ಕೆ ಡಾ: ಕಸ್ತೂರಿ ರಂಗನ್ ಅವರ ಕೊಡುಗೆ ಅಪಾರವಾದುದು

ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ: ಕೆ ಕಸ್ತೂರಿ ರಂಗನ್‌ರವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು.

ಅವರು ದೇಶ ಕಂಡಂತ ಹೆಸರಾಂತ ವಿಜ್ಞಾನಿ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ದೀರ್ಘ ಕಾಲ ಇಸ್ರೋ ಅಧ್ಯಕ್ಷರಾಗಿದ್ದವರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡ ಮಾಡುವ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ  ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಪರಿಸರ ಕ್ಷೇತ್ರಕ್ಕೆ ಹಾಗೂ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾದುದು. ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. 

 ಅನಿವಾರ್ಯವಾದಾಗ ಮಾತ್ರ ಯುದ್ಧಮಾಡಬೇಕು

ಯುದ್ಧ ಬೇಡ ಎಂಬ ಮುಖ್ಯಮಂತ್ರಿಗಳ ಹೇಳಿಕೆಯ ಬಗ್ಗೆ ಚರ್ಚೆಗಳಾಗುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ  ಮುಖ್ಯಮಂತ್ರಿಗಳು ಯುದ್ಧ ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಯುದ್ಧದಿಂದ ಪರಿಹಾರವಾಗಲು ಸಾಧ್ಯವಿಲ್ಲ. ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಕೇಂದ್ರ ಸರ್ಕಾರದ  ಭದ್ರತಾ ವ್ಯವಸ್ಥೆಯ ವೈಫಲ್ಯ ಇದೆ ಎಂದು ಹೇಳಿದ್ದೇನೆ. 28 ಜನ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಅಸುನೀಗಿದ್ದಾರೆ. ಹಿಂದೆ ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಮೃತಪಟ್ಟಿದ್ದರು. ಕೇಂದ್ರ ಸರ್ಕಾರ ಭದ್ರತೆಯನ್ನು ಸರಿಯಾದ ರೀತಿಯಲ್ಲಿ ಕೊಟ್ಟಿರಲಿಲ್ಲ. ತಕ್ಷಣಕ್ಕೆ ಯುದ್ಧ ಬೇಡ ಆದರೆ ಯುದ್ಧ ಮಾಡಲೇಬಾರದು ಎಂದೇನಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು  ಓಲೈಕೆ ರಾಜಕಾರಣ ಮಾಡುತ್ತಾರೆ ಎಂಬ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ ಸಿಎಂ ಬಿಜೆಪಿ ಹೇಳುವುದೆಲ್ಲ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ