ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ

ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ‌ʼಎಕ್ಸ್ʼ ಜಾಲತಾಣದ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಪಾಕ್‍ ಪ್ರೇರಿತ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯವೇ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ. ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ. ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ