ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

₹5300 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ಕೊಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದರೂ ನಯಾಪೈಸೆ ಕೊಡಲಿಲ್ಲ: ಸಿಎಂ ಸಿದ್ದರಾಮಯ್ಯ

ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಭೆಯಲ್ಲಿ ಸಿಎಂ ಅಸಮಾಧಾನ

ಬೆಂಗಳೂರು ಮೇ 14: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು. 

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು. 

ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ  ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ , ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.  15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು  11495  ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ. 

ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು. 

ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ  ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು. 

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ: ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು: ಕೇಂದ್ರಕ್ಕೆ ಇದನ್ನೂ ಏಕೆ ಕೊಡಲಾಗುತ್ತಿಲ್ಲ

ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ.  ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು.

ಕೇಂದ್ರದಿಂದ ಇನ್ನೂ ನರೇಗಾ ಹಣ ಬಾರದ ಅಂಕಿ ಅಂಶಗಳನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಕೇಂದ್ರ ಪಿಂಚಣಿ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಮಟ್ಟದಲ್ಲಿ ದಿಶಾ ಸಭೆಗಳು ನಿಗಧಿತವಾಗಿ ನಡೆಯಬೇಕು ಎಂದು ಸೂಚನೆ ನೀಡಿದ ಮುಖ್ಯಮಂತ್ರಿಗಳು ಸಂಸದರೂ ಈ ಬಗ್ಗೆ ಆಸಕ್ತಿ ವಹಿಸಬೇಕು ಎಂದರು.

ಮೂರು ತಿಂಗಳ ಒಳಗೆ ನರೇಗಾ ಕ್ರಿಯಾ ಯೋಜನೆ ಕಡ್ಡಾಯವಾಗಿ ಸಿದ್ದಪಡಿಸಬೇಕು. ಏನೇ ಕಾರಣದಿಂದ ಹಿಂದಿನ ಕ್ರಿಯಾ ಯೋಜನೆ ಆಗಿದ್ದರೆ ಅದನ್ನು ಮುಂದಿನ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಎಂದು ಸಿಎಂ ಸೂಚನೆ ನೀಡಿದರು.  ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಾಗಿ ಕೇಂದ್ರದಿಂದ ಬರಬೇಕಾಗಿದ್ದ ಎರಡು ವರ್ಷದ ಪಾಲು 10000 ಬಾಕಿ  ಕೋಟಿಯಷ್ಟು ಬಾಕಿ ಉಳಿದಿದೆ. ಹೀಗೆ ಬಾಕಿ ಉಳಿಸಿಕೊಂಡಿರುವುದರಿಂದ  ಬಹಳ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದರು. 

23-24 ರ ಸಾಲಿನಲ್ಲಿ 7656 ಕೋಟಿ, 24-25 ರ ಸಾಲಿನಲ್ಲಿ 3233 ಕೋಟಿ ಹಣವನ್ನು ಕೇಂದ್ರ ಜಲಜೀವನ್ ಮಿಷನ್ ಯೋಜನೆಯಲ್ಲಿ ಬಾಕಿ ಉಳಿಸಿಕೊಂಡಿದೆ ಎಂದು ಅಧಿಕಾರಿಗಳು ಅಂಕಿ ಅಂಶ ಮುಂದಿಟ್ಟರು. ಈ ವೇಳೆ, ಏಕೆ ಕೇಂದ್ರ ಸರ್ಕಾರದ ಬಳಿ ಹಣ ಇಲ್ಲವೇ ? ಕುಡಿಯುವ ನೀರಿಗೆ ಹಣ ಕೊಡಲಾಗದಷ್ಟು ಕೇಂದ್ರ ದುರ್ಬಲವಾಗಿದೆಯೇ ಎಂದು ದಿಶಾ ಸಮಿತಿ ಸದಸ್ಯರಾದ ಶಾಸಕ ರಿಜ್ವಾನ್ ಅರ್ಷದ್ ಅವರು ಸಂಸದರಿಗೆ ಪ್ರಶ್ನಿಸಿದರು.‌

2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ 24960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ  22758ಕೋಟಿ ರೂಪಾಯಿಗಳಿದ್ದು ಕೇಂದ್ರದಿಂದ 18561ಕೋಟಿ ಮಾತ್ರ ಬಿಡುಗಡೆ ಆಗಿದೆ 4195 ಕೋಟಿ ರೂಪಾಯಿಗಳು  ಬಿಡುಗಡೆ ಆಗಿರುವುದಿಲ್ಲ. ರಾಜ್ಯಕ್ಕೆ ಬರಬೇಕಾಗಿರುವ ಹಣವನ್ನು ಸರಿಯಾಗಿ ಬಿಡುಗಡೆ ಮಾಡದಿದ್ದರೆ ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು .  

ಭದ್ರ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಬಜೆಟ್ನಲ್ಲಿ 5360 ಕೋಟಿ ಅನುದಾನ ಘೋಷಣೆ ಹಾಗಿದ್ದರೂ ಒಂದು ರೂಪಾಯಿ ಕೂಡಾ ಈವರೆಗೂ ಬಿಡುಗಡೆ ಆಗಿರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಎರಡು ಬಾರಿ ನಿಯೋಗದೊಂದಿಗೆ ಭೇಟಿ ಮಾಡಿದ್ದರೂ ಪ್ರಯೋಜನವಾಗಿಲ್ಲ.

ದಿಶಾ ಸಮಿತಿ ಸದಸ್ಯರು ರಾಜ್ಯಕ್ಕೆ ಕೇಂದ್ರದ ಪಾಲನ್ನು ತರುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಬೇಕು ಎಂದು ಸೂಚಿಸಿದರು. ಸಾಮಾಜಿಕ ಭದ್ರತಾ ಯೋಜನೆಯಡಿ ವಿಧವಾ ಪಿಂಚಣಿ, ವೃದ್ದಾಪ್ಯ ಪಿಂಚಣಿ, ಅಂಗವಿಕಲರ ಪಿಂಚಣಿ ಯೋಜನೆಗಳಿಗೆ ರಾಜ್ಯದ ಅನುದಾನ 5665.95 ಕೋಟಿ, ಕೇಂದ್ರದ ಅನುದಾನ 559.61ಕೋಟಿ ಆದರೆ ಕೇಂದ್ರದಿಂದ ಬಿಡುಗಡೆ ಆಗಿರುವುದು 113.92ಕೋಟಿ ಮಾತ್ರ . ಸಾಮಾಜಿಕ ಯೋಜನೆಗಳಲ್ಲೂ ಕಡಿತ ಮಾಡಿದರೆ ಹೇಗೆ  ಎಂದು  ಪ್ರಶ್ನಿಸಿದರು.

ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸಕಾಲದಲ್ಲಿ  ಹಣ ಬಿಡುಗಡೆ ಆಗದಿದ್ದರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಹೇಗೆ? ಎಂದು ಸಮಿತಿ ಸದಸ್ಯರನ್ನು ಪ್ರಶ್ನಿಸಿದರು. ರಾಜ್ಯದಲ್ಲಿ ನರೇಗಾ ಯೋಜನೆ ಮಾಡಿ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು, ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಿದರು.  

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ