ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು

ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಮಂಗಳೂರು: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು  ಸಿ.ಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. 

ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು.

ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌. ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದರು. 

ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ. ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ