ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ; ಕಾನೂನಿಗಿಂತ ದೊಡ್ಡವರು ಯಾರಿಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 29: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನಾನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

ಡಿಸಿ ಸಿಇಒಗಳೊಂದಿಗೆ ಎರಡು ದಿನ ಸಭೆ

ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯಲಿರುವ ಡಿ.ಸಿ.ಹಾಗೂ ಸಿಇಒಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ