ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಸತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿ ಇತರೆ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು

• ವಸತಿ ಯೋಜನೆಗಳು ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ವೇಗದಲ್ಲಿ ಅನುಷ್ಟಾನಗೊಳ್ಳುತ್ತಿಲ್ಲ. ವಿವಿಧ ವಸತಿ ಯೋಜನೆಗಳಡಿಯಲ್ಲಿ 6,29,961 ಮನೆಗಳು ಮಂಜೂರಾಗಿದ್ದು, 3,63,769 ಮನೆಗಳು ಪ್ರಗತಿಯಲ್ಲಿವೆ. ನಗರ ಪ್ರದೇಶದಲ್ಲಿ 42,538 ಮನೆಗಳು ಮಂಜೂರಾಗಿದ್ದು, 37,303 ಮನೆಗಳು ಪ್ರಗತಿಯಲ್ಲಿವೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ ಇನ್ನೂ 5,22,160 ಫಲಾನುಭವಿಗಳ ಆಯ್ಕೆ ಬಾಕಿಯಿದ್ದು, ಆಯ್ಕೆ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು.

• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯದಿಂದ ಸಾವಿಗೀಡಾಗುವ ಪ್ರಕರಣಗಳಲ್ಲಿ ಕೇವಲ ತಾಂತ್ರಿಕ ಕಾರಣಕ್ಕೆ ಪರಿಹಾರ ನಿರಾಕರಿಸಬಾರದು. ದೌರ್ಜನ್ಯದಿಂದ ಸಾವಿಗೀಡಾಗಿರುವುದು ಸಾಬೀತಾದರೆ ಉದ್ಯೋಗ ಕಲ್ಪಿಸುವುದು ಸೇರಿದಂತೆ ಎಲ್ಲಾ ಪರಿಹಾರಗಳನ್ನು ಹಿಂದಿನ ದಿನಾಂಕದಿಂದಲೇ ಒದಗಿಸಬೇಕು.


• ಒಳಮೀಸಲಾತಿ ಸಮೀಕ್ಷೆಯನ್ನು ಎರಡು ತಿಂಗಳ ಕಾಲ ವಿಸ್ತರಿಸಲಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಶೇ.100ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.


• ಅರಣ್ಯ ಹಕ್ಕುಗಳಿಗಾಗಿ 295176 ಅರ್ಜಿಗಳು ಸಲ್ಲಿಕೆಯಾಗಿದ್ದು, 16700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ. 261762 ಅರ್ಜಿಗಳನ್ನು ತಿರಸ್ಕರಿಸಲಾಗಿದೆಡಿ. ಸಕಾರಣವಿಲ್ಲದೇ ತಿರಸ್ಕರಿಸಲಾಗಿರುವ ಅರ್ಜಿಗಳನ್ನು ಮರು ಪರಿಶೀಲನೆ ನಡೆಸಬೇಕು. ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳಿಗೆ ಅರಣ್ಯ ಹಕ್ಕು ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ.


• ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಫಲಿತಾಂಶ ರಾಜ್ಯದ ಫಲಿತಾಂಶಕ್ಕಿಂತ ಕಡಿಮೆಯಾಗಿದ್ದು, ಇದನ್ನು ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕು. ಡಿಡಿಪಿಐ, ಬಿಇಒ, ಶಿಕ್ಷಕರು ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಫಲಿತಾಂಶ ಸುಧಾರಣೆಗೆ ಸಿಇಒ ನೇರ ಹೊಣೆ.


• ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿಗೆ 2023-24ನೇ ಸಾಲಿನಲ್ಲಿ ರೂ.541 ಕೋಟಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 178 ಕಾಮಗಾರಿಗಳನ್ನು ಪ್ರಾರಂಭಿಸಿ 26 ಕಾಮಗಾರಿಗಳನ್ನು ಮಾತ್ರ ಪೂರ್ಣಗೊಳಿಸಲಾಗಿದ್ದು, ಒಟ್ಟು ರೂ.502 ಕೋಟಿ ವೆಚ್ಚವಾಗಿದೆ. 2024-25 ನೇ ಸಾಲಿನಲ್ಲಿ 229.5 ಕೋಟಿ ರೂ. ಮಂಜೂರಾಗಿದ್ದು, ರೂ.76 ಕೋಟಿ ಬಿಡುಗಡೆಯಾಗಿ ರೂ.35 ಕೋಟಿ ವೆಚ್ಚವಾಗಿದೆ. ಇದರಲ್ಲಿ 41 ಕಾಮಗಾರಿಗಳನ್ನು ಪ್ರಾರಂಭಿಸಲಾಗಿದ್ದು, 3ಕಾಮಗಾರಿಗಳು ಪೂರ್ಣಗೊಂಡಿವೆ. 27 ಕಾಮಗಾರಿಗಳು ಇನ್ನೂ ಪ್ರಾರಂಭವಾಗಬೇಕಿದ್ದು, ನಿಗದಿತ ಅವಧಿಯ ಒಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.


• ಗಂಗಾ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿನಲ್ಲಿ ಒಟ್ಟು 3072 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಒಟ್ಟು 4345 ಅರ್ಜಿಗಳು ಸಂಪರ್ಕ ಕಲ್ಪಿಸಲು ಬಾಕಿಯಿವೆ. ಬಾಕಿಯಿರುವ ಪ್ರಕರಣಗಳಲ್ಲಿ ಆದಷ್ಟು ಬೇಗನೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಸಂಬಂಧಪಟ್ಟ ನಿಗಮಗಳೊಂದಿಗೆ ಆಯಾ ಜಿಲ್ಲಾಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ