ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ ಸೂಚನೆಗಳು

ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಯ ವೇಳೆ ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಅಂಶಗಳು

• ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

• ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ.

• ಜಿಲ್ಲೆಗಳಲ್ಲಿ ಎಸ್‌ಡಿಆರ್‌ಎಫ್ ಅಡಿ ಒಟ್ಟಾರೆಯಾಗಿ ಒಂದು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಲಭ್ಯವಿದೆ.

• ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಉಂಟಾದರೆ ಈಗಾಗಲೇ ಪರಿಹಾರ ಒದಗಿಸುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತಕ್ಷಣ ಪರಿಹಾರ ಒದಗಿಸುವ ಕಾರ್ಯ ನಡೆಯಬೇಕಿದೆ.

• ಭೂಕುಸಿತದಂತಹ ಪ್ರಕರಣಗಳಲ್ಲಿ ಸಾವಿನ ಸಂಭಾವ್ಯತೆಯನ್ನು ತಪ್ಪಿಸಲು, ಜನರ ತೆರವು ಕಾರ್ಯ ಸೇರಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು.

• ಮಳೆ ಹಾನಿ ಪ್ರದೇಶಗಳಿಗೆ ಡಿಸಿ, ಸಿಇಒ ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು.

• ಸಂಪೂರ್ಣ ಮನೆ ಹಾನಿ ಪ್ರಕರಣಗಳಲ್ಲಿ ರೂ. 1.20 ಲಕ್ಷ ಮನೆ ಹಾನಿ ತಕ್ಷಣ ಪರಿಹಾರ ಒದಗಿಸಲಾಗುತ್ತಿದೆ. ಅಂತಹವರಿಗೆ ಹೊಸ ಮನೆ ಒದಗಿಸಲು ಕಳೆದ ವರ್ಷದಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

• ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು.

• ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಅವರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ.

• ಬೆಂಗಳೂರು ನಗರದಲ್ಲಿ ಮಳೆ ಬಗ್ಗೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಯಾಕೆ ಸಾಧ್ಯವಿಲ್ಲ. ತಗ್ಗು ಪ್ರದೇಶ, ನೀರು ನಿಲ್ಲುವ ಪ್ರದೇಶದ ಮಾಹಿತಿ ಮೊದಲೇ ಇರುತ್ತದೆ. ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾ ಶೀಲರಾಗಿ ಕಾರ್ಯನಿರ್ವಹಿಸಬೇಕು. ತಾತ್ಕಾಲಿಕ ಕ್ರಮಗಳೊಂದಿಗೆ ಶಾಶ್ವತ ಪರಿಹಾರಕ್ಕೂ ಕ್ರಮ ಕೈಗೊಳ್ಳಬೇಕು.

• ಗ್ರಾಮ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಜಮೀನು ಗುರುತಿಸಿ, ಒತ್ತುವರಿಯನ್ನು ಗುರುತಿಸುವ ಕಾರ್ಯ ಶೇ.95ರಷ್ಟು ಪೂರ್ಣಗೊಂಡಿದೆ. 14,15,492 ಎಕರೆ ಸರ್ಕಾರಿ ಜಮೀನು ಒತ್ತುವರಿಯನ್ನು ಈಗಾಗಲೇ ಗುರುತಿಸಲಾಗಿದೆ.

• ಬಗರ್ಹುಕುಂ ಒಟ್ಟು 14,28,838 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ವಿಲೇವಾರಿ ಬಹಳ ವಿಳಂಬವಾಗುತ್ತಿದ್ದು, ಅರ್ಹ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು.

ಸಭೆ ವೇಳೆ ನಾನಾ ವಿಚಾರಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು

• ಸ್ಮಶಾನ ಮತ್ತು ಕಬರಸ್ತಾನಗಳಿಗೆ ಜಮೀನು ಒದಗಿಸಲು ಆದ್ಯತೆ ನೀಡಬೇಕು.

• ಸರ್ಕಾರಿ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿ ಮಾಡಿ ಒದಗಿಸಬೇಕು.

• ಹಾಸ್ಟೆಲ್ಗಳಿಗೆ ನಿವೇಶನ ಗುರುತಿಸುವ ಸಂದರ್ಭದಲ್ಲಿ ಊರಿನಿಂದ ಬಹಳ ದೂರವಿರುವ ನಿರ್ಜನ ಪ್ರದೇಶದಲ್ಲಿ ನೀಡಬಾರದು. ನಿವೃತ್ತ ಸೈನಿಕರಿಗೆ ನಿವೇಶನ ಕುರಿತಾದ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಿ ಅವರಿಗೆ ಜಮೀನು ಒದಗಿಸಬೇಕು. ಪ್ರತಿ ತಾಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಒತ್ತುವರಿಯಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸಬೇಕು

• ಮುಂದಿನ ಸಭೆಯ ವೇಳೆ ನಿವೇಶನ ಲಭ್ಯವಿಲ್ಲದ ಬಗ್ಗೆ ಯಾವುದೇ ದೂರು ಬರಬಾರದು.

•ಸೈನಿಕರ ಕಲ್ಯಾಣ ನಿಗಮ ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ಒಟ್ಟು 59 ತಾಲೂಕುಗಳಲ್ಲಿ ಕ್ರೀಡಾಂಗಣಗಳು ಲಭ್ಯವಿಲ್ಲ. ಎಲ್ಲಾ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನು ಗುರುತಿಸಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.

•ಯುವನಿಧಿ ಯೋಜನೆಯಡಿ ಪ್ರತಿ ಫಲಾನುಭವಿಗೆ ಎರಡು ವರ್ಷಗಳ ಅವಧಿಗೆ ನೆರವು ನೀಡಲಾಗುತ್ತಿದ್ದು, ಈ ಅವಧಿಯಲ್ಲಿ ಫಲಾನುಭವಿಗಳಿಗೆ ಉದ್ಯೋಗ ದೊರೆತರೆ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಿದರೆ ನೆರವು ಸ್ಥಗಿತಗೊಳ್ಳುತ್ತದೆ.

• ಪ್ರತಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರ ಬೆಳವಣಿಗೆ ಮೇಲೆ ನಿಗಾ ವಹಿಸಬೇಕು.

• ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು. ಅರ್ಜಿಗಳನ್ನು ಕಾಟಾಚಾರಕ್ಕೆ ವಿಲೇವಾರಿ ಮಾಡದೆ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ