ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಆರ್‌ಸಿಬಿ ವಿಜಯೋತ್ಸವ ಸಂದರ್ಭ ಕಾಲ್ತುಳಿತ ಅನಾಹುತ: ಸಿಎಂ ಸಿದ್ದರಾಮಯ್ಯನವರಿಂದ ಸುದ್ದಿಗೋಷ್ಠಿ

ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ಸ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಐಪಿಎಲ್‌ 18ನೇ ಆವೃತ್ತಿಯ ಪ್ರಶಸ್ತಿಯನ್ನು ಜಯಸಿದ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾಗ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತುರ್ತು ಸುದ್ದಿಗೋಷ್ಠಿ ನಡೆಸಿದರು. ಇದರ ಪ್ರಮುಖಾಂಶಗಳು ಈ ಕೆಳಗಿನಂತಿವೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ.

• ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

• ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

• ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.

• ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ.

• ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

• ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು.

• ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

• ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರೀಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

• ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ