ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಜೂನ್16 : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು.

ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.

ಕಾಯ್ದೆಯ ಪ್ರಕಾರ ಮರುಗಣತಿ

ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ