ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜೂನ್ 27: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರ ಬೆಂಗಳೂರು ಅಭಿವೃದ್ಧಿಗೊಳಿಸುವ ಕನಸನ್ನು ನನಸು ಮಾಡಲಿದೆ

ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ

ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ