ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಆರ್‌ಎಸ್‌ಎಸ್‌ಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 28: ಆರ್‌ಎಸ್‌ಎಸ್‌ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಆರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಆರ್‌ಎಸ್‌ಎಸ್‌ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ. ಸಂವಿಧಾನ ಶಾಸನ ಸಭೆಯಲ್ಲಿ ಚರ್ಚೆಯಾಗಿ ರಚನೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ. ಜಾತ್ಯಾತೀತ ಮತ್ತು ಸಮಾಜವಾದ ಎಂಬ ಪದಗಳನ್ನು ನಂತರ ಸೇರಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸಂಸತ್ತಿನಲ್ಲಿ ಇದು ಚರ್ಚೆಯಾಗಿ ಸoವಿಧಾನ ತಿದ್ದುಪಡಿ ಮಾಡಲಾಗಿದೆ. ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ ಎಂದರು.

ಹುಲಿಗಳ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮ

ಹುಲಿಗಳ ಸಾವಿನ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ