ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

10 ದಿನಗಳ ಬಳಿಕ ಪುನಃ ಸಭೆ ನಡೆಸಿ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇವನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈ ಬಿಡುವ ವಿಚಾರ

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ. ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಆಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದ್ದು, ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಹೀಗಾಗಿ ನಿಯಮಾನುಸಾರ ಅಂತಿಮ ನೋಟಿಫಿಕೇಶನ್‌ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದರು. ಈ ವಿಷಯವಾಗಿ ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲದೆ ಇರುವುದರಿಂದ 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು ಎಂದರು.

ನಾನೂ ರೈತ ಸಂಘದಲ್ಲಿದ್ದವನು

ನಾವು ಪ್ರಜಾಪ್ರಭುತ್ವದಲ್ಲಿ ಮತ್ತು ಸಂವಾದದಲ್ಲಿ ನಂಬಿಕೆಯಿರುವವರು. ಪ್ರತಿಭಟನೆಗೆ ನಾವು ಯಾವುದೇ ರೀತಿಯಾಗಿ ಅಡ್ಡಿಪಡಿಸಿಲ್ಲ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಕೂಡ ಸರ್ಕಾರ ಮಾಡಿಲ್ಲ, ನಾನೂ ರೈತ ಸಂಘದಲ್ಲಿದ್ದವನು ಎಂದು ಸಿಎಂ ತಿಳಿಸಿದರು.

ಈ ಸಂದರ್ಭ ಸಚಿವರಾದ ಕೆ. ಎಚ್.ಮುನಿಯಪ್ಪ, ಭೈರತಿ ಸುರೇಶ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Share the Post:

Related Posts

ಮಾನವೀಯ ತಂತ್ರಜ್ಞಾನವನ್ನು ಹೊಂದುವುದು  ಕರ್ನಾಟಕ ಸರ್ಕಾರದ ಭವಿಷ್ಯದ ಕಲ್ಪನೆಯಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ತಂತ್ರಜ್ಞಾನದ ಜೊತೆಗೆ ವ್ಯಾಪಾರ, ನಾವೀನ್ಯತೆ, ಜನರ  ಸಹಯೋಗ ಹಾಗೂ ವಿಶ್ವದೊಂದಿಗಿನ  ಪಾಲುದಾರಿಕೆಯತ್ತ ಕರ್ನಾಟಕ ಆಸಕ್ತಿ ಹೊಂದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಲ್ಲಿ ಬ್ರಿಡ್ಜ್ ಟು

Read More

ಕುಡಿಯುವ ನೀರಿನ ಕುರಿತಾದ ಟಾಸ್ಕ್‌ ಪೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು, ಮೇವು ಪೂರೈಕೆ ಹಾಗೂ ಕೃಷಿ ಚಟುವಟಿಕೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಅಗತ್ಯ ತಯಾರಿ ಕುರಿತು ನಡೆದ ಸಭೆಯಲ್ಲಿ ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ