ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜಾತಿ ವ್ಯವಸ್ಥೆಗೆ ಚಲನೆ ಇಲ್ಲದಿರುವುದರಿಂದ, ಜಾತಿ ಸಮಾಜದಲ್ಲಿ ಪ್ರಗತಿ ವೇಗವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಜು 5: ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ನಮ್ಮ ಜಾತಿಯ ದೃಷ್ಟಿಕೋನ ವೈಜ್ಞಾನಿಕ ದೃಷ್ಟಿಕೋನ ಬೆಳೆಯಲು ಅಡ್ಡಿಯಾಗಿದೆ

ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಆದರೆ ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು . ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದರು.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕುಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ. ಈ ಕತೆಯನ್ನು ಕೆಲವು ಜನರೂ ನಂಬುವುದರಿಂದ ನಮಗೆ ಮತಗಳೆ ಬರುವುದಿಲ್ಲ ಎಂದು ವಿವರಿಸಿದರು.

ಕುವೆಂಪು ಅವರ ಪ್ರಖರ ವೈಚಾರಿಕತೆ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಡ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೆ ಒಳಪಟ್ಟರಬೇಕು ಎಂದರು.

ಗುಡಿ, ಚರ್ಚು, ಮಸೀದಿಗಳ ಬಿಟ್ಟು ಬನ್ನಿ. ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಜಾರಿಯಾಗಲಿ ಎಂದು ಆಶಿಸಿದರು.

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯ

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ಸರ್ಕಾರದ ಅಭಿಪ್ರಾಯ ಆಗುವ, ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಸಿಎಂ ಭರವಸೆ ನೀಡಿದರು.

ಈ ಸಂದರ್ಭ ನಾಡೋಜ ಡಾ. ಹಂ.ಪ.ನಾಗರಾಜಯ್ಯ, ವಿಶ್ರಾಂತ ನ್ಯಾಯಾಧೀಶರಾದ ಹೆಚ್.ಎನ್.ನಾಗಮೋಹನ್ ದಾಸ್, ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ, ಕೃತಿಯ ಸಂಪಾದಕರಾದ ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಜನ ಪ್ರಕಾಶನದ ಬಿ.ರಾಜಶೇಖರಮೂರ್ತಿ, ಹೆಚ್.ಎನ್.ಹರಿ, ಎ.ವಿ.ಶ್ರೀಹರಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ