ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ, ಜುಲೈ 9 : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಉತ್ತರಪ್ರದೇಶ ಹಾಗೂ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು.

ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ